ಬೆಂಗಳೂರು (ಅ.13): ಕಾಂಗ್ರೆಸ್ ಕಚೇರಿಯಲ್ಲಿ ಇಂದಿರಾ ಹೆಸರಲ್ಲಿ ಬಾರ್, ನೆಹರು ಹೆಸರಲ್ಲಿ ಹುಕ್ಕಾ ಬಾರ್ ತೆರೆಯಲಿ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಪಕ್ಷದ ಕಚೇರಿಯಲ್ಲಿ ಗುರುವಾರ ಪತ್ರಿಕಾಗೋಷ್ಠಿ ನಡೆಸಿದ ಅವರು, ಇಂದಿರಾ ಕ್ಯಾಂಟೀನ್ ಅನ್ನು ಅನ್ನಪೂರ್ಣೇಶ್ವರಿ ಕ್ಯಾಂಟೀನ್ ಮಾಡಲಿ. ಬಡವರಿಗೆ ಅನ್ನಪೂರ್ಣೇಶ್ವರಿ ಹೆಸರಲ್ಲಿ ಅನ್ನ ಕೊಟ್ಟರೇನು? ಇಂದಿರಾ ಹೆಸರಲ್ಲಿ ಅನ್ನ ಕೊಟ್ಟರೇನು? ಜನರ ತೆರಿಗೆಯಿಂದ ಅನ್ನ ಕೊಡುವುದಲ್ಲವೇ? ಕಾಂಗ್ರೆಸ್ ಕಚೇರಿಯಲ್ಲಿ ನೆಹರು ಮತ್ತು