ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಜೊತೆ ಜೆಡಿಎಸ್ ಮೈತ್ರಿ ಮಾಡಿಕೊಂಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಹೇಳಿಕೆಗೆ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. ಬೆಂಗಳೂರಿನ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ನಿಮಗೆ ಅದು ದೊಡ್ಡದಾಗಿ ಕಾಣುತ್ತಿದೆ. ಏನು ಸರಿ ಮಾಡಬೇಕೋ ಅದನ್ನು ನಾವು ಮಾಡುತ್ತೇವೆ.. ಅವರೇ ಒರಿಜಿನಲ್ ಎಂದು ಬೋರ್ಡ್ ಹಾಕಿಕೊಳ್ಳಲಿ. ಅವರೇ ಒರಿಜಿನಲ್ ಎಂದು ಬರೆದುಕೊಳ್ಳಲಿ ಎಂದು ಟಾಂಗ್ ಕೊಟ್ಟಿದ್ದಾರೆ.