ದೇಶದ ಹಿತದೃಷ್ಟಿಯಿಂದ ಹಲವು ಪ್ರಮುಖ ವಿಧೇಯಕಗಳು ಜಾರಿಯಾಗಬೇಕಿದೆ. ಈ ಹಿನ್ನೆಲೆಯಲ್ಲಿ ದೇಶದ ಪ್ರಮುಖ ವಿರೋಧ ಪಕ್ಷಗಳ ನಾಯಕರನ್ನು ಭೇಟಿಯಾಗುತ್ತಿದ್ದೇವೆ. ಹೀಗಂತ ಕೇಂದ್ರ ಸಚಿವ ಹೇಳಿದ್ದಾರೆ.ಸುಗಮ ಕಲಾಪಕ್ಕೆ ಅವಕಾಶ ಕೊಡಲು ಮನವಿ ಮಾಡಿದ್ದೇವೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಹೇಳಿದರು.ಹುಬ್ಬಳ್ಳಿ ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದ ಹಿತ ದೃಷ್ಟಿಯಿಂದ 10 ಕ್ಕೂ ಹೆಚ್ಚು ವಿಧೇಯಕಗಳು ಮಂಡನೆ ಮಾಡಬೇಕಾಗಿದೆ. ಈ ಬಗ್ಗೆ ಸರ್ಕಾರ ಯಾವುದೇ ಚರ್ಚೆಗೆ ಸಿದ್ಧವಿದೆ. ಆದರೆ