ನಮ್ಮ ಪ್ರಜಾಧ್ವನಿ ಯಾತ್ರೆ ನೋಡಿ ಬಿಜೆಪಿ ಮತ್ತು ಜೆಡಿಎಸ್ ಗೆ ಹಿನ್ನಡೆ ಆಗುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದರು. ಚಿತ್ರದುರ್ಗ ಕ್ಕೆ ಹೋಗುವ ಮೊದಲು ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು ಪ್ರಜಾಧ್ವನಿ ಯಾತ್ರೆ ನೋಡಿ ಬಿಜೆಪಿ ಮತ್ತು ಜೆಡಿಎಸ್ ಗೆ ಹಿನ್ನಡೆ ಆಗುತ್ತಿದೆ. ಪ್ರಜಾಧ್ವನಿ ಯಾತ್ರೆಗೆ ಸೇರುತ್ತಿರುವ ಜನ ನೋಡಿದರೆ ಅದು ಸಾಬೀತಾಗುತ್ತಿದೆ. ಕಾಂಗ್ರೆಸ್ ನವರು ಕೊಟ್ಟ ಮಾತು ಉಳಿಸಿಕೊಳ್ಳುವ ಕೆಲಸ ಮಾಡ್ತಾ ಬಂದಿದ್ದೇವೆ ಎಂದು ಹೇಳಿದರು.