ತುಮಕೂರು : ಸ್ವಾತಂತ್ರ್ಯ ಅಮೃತ ಮಹೋತ್ಸವದ ಈ ಸಂದರ್ಭದಲ್ಲಿ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಮತ್ತು ಸಮರ್ಪಣೆಯನ್ನು ಸ್ಮರಿಸುವುದರ ಜೊತೆಗೆ ದೇಶದ ಅಭಿವೃದ್ಧಿಗಾಗಿ ನಾವೆಲ್ಲರೂ ಶ್ರಮಿಸಬೇಕು.ಕರ್ನಾಟಕದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಹೇಳಿದರು. ರಾಷ್ಟ್ರೀಯ ಮಾನವ ಪರಿಸರ ಸಂರಕ್ಷಣಾ ಪಡೆ ತುಮಕೂರು ವತಿಯಿಂದ ಭಾರತೀಯ ಸ್ವಾತಂತ್ರ್ಯೋತ್ಸವದ 75ನೇ ವರ್ಷದ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಅಮೃತ ಭಾರತ ರಾಷ್ಟ್ರೀಯ ಜಾಗೃತಿ ಅಭಿಯಾನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಆಜಾದಿಯ ಅಮೃತ್ ಮಹೋತ್ಸವವು 75