ಪುಣ್ಯಕೋಟಿ ನಾಡಿನಲ್ಲಿ ಗ್ಯಾರಂಟಿ ಕಾರ್ಡ್ ಹಿಡಿದು ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದೆ. ತಾವು ನುಡಿದಂತೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಷರತ್ತು ರಹಿತವಾಗಿ ಜಾರಿಗೆ ತರುವ ಮೂಲಕ ಜನರ ಆಶೋತ್ತರಗಳನ್ನು ಈಡೇರಿಸಬೇಕೆಂದು ಮಾಜಿ ಸಚಿವ, ಶಾಸಕ ಸಿ.ಸಿ.ಪಾಟೀಲ್ ಆಗ್ರಹಿಸಿದರು. ಗದಗದ ನರಗುಂದದಲ್ಲಿ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ಸರ್ಕಾರದ ಸಚಿವರಲ್ಲಿಯೇ ಅಪಸ್ವರ ಇದೆ. ಷರತ್ತುಗಳನ್ನು ಹಾಕದೇ ಗ್ಯಾರಂಟಿ ಯೋಜನೆಗಳನ್ನು ನೀಡಬೇಕು. ಅತಿಯಾದ ಕಂಡಿಷನ್ ಹಾಕಿದರೆ ಯೋಜನೆಗಳಿಂದ ವಂಚಿತರಾದ ಜನರು