ಬೆಂಗಳೂರು : ನಮ್ಮನ್ನು ಅಮಾನತು ಮಾಡಲಿ, ಕೆಲಸದಿಂದ ವಜಾ ಮಾಡಲಿ, ಎಸ್ಮಾ ಜಾರಿಗೆ ತರಲಿ, ಆದರೆ ನಾವು ಯಾವುದಕ್ಕೂ ಹೆದರುವುದಿಲ್ಲ, ಮುಷ್ಕರ ನಡೆಯುತ್ತದೆ ಎಂದು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರಿ ನೌಕರರ ಹೋರಾಟಕ್ಕೆ 40 ಸಂಘಟನೆಗಳ ಬೆಂಬಲ ನೀಡಿದೆ. ಬುಧವಾರದಿಂದ ಎಲ್ಲಾ ಸರ್ಕಾರಿ ಕಚೇರಿಗಳನ್ನು ಬಂದ್ ಮಾಡಿ ಪ್ರತಿಭಟನೆ ಮಾಡುತ್ತೇವೆ.ಸರ್ಕಾರದ ಯಾವುದೇ ಭರವಸೆಗಳಿಗೆ ಬಗ್ಗಲ್ಲ. ಅಧಿಕೃತ ಆದೇಶದೊಂದಿಗೆ ಬರದ ಹೊರತು