ಮೂಡಿಗೆರೆ ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿ ವಿರುದ್ಧ ಅಸಮಾಧಾನ ಇನ್ನೂ ನಿಂತಿಲ್ಲ. ಪಕ್ಷದ ಕಾರ್ಯಕರ್ತರು, ಶಾಸಕರ ವಿರುದ್ಧ ಬಂಡಾಯ ಎದ್ದಿದ್ದಾರೆ. ಕಳೆದ ಕೆಲ ದಿನಗಳ ಹಿಂದೆ ಬಿಜೆಪಿ, ಮೂಡಿಗೆರೆಯಲ್ಲಿ ಡಬಲ್ ಇಂಜಿನ್ ಸರ್ಕಾರದ ಸಾಧನೆಗಳನ್ನು ಹೇಳುತ್ತಾ ವಿಜಯ ಸಂಕಲ್ಪ ಯಾತ್ರೆ ಮಾಡಿತ್ತು. ಈ ಯಾತ್ರೆಗೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಕೂಡ ಆಗಮಿಸಿದ್ದರು. ಈ ವೇಳೆ ಕಾರ್ಯಕರ್ತರು ಅಸಮಾಧಾನಗೊಂಡು ಎಂ.ಪಿ.ಕುಮಾರಸ್ವಾಮಿಯವರಿಗೆ ಯಾವುದೇ ಕಾರಣಕ್ಕೂ ಟಿಕೆಟ್ ನೀಡಬೇಡಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.