ಕೊರೊನಾ ಸಂದಿಗ್ಧ ಪರಿಸ್ಥಿತಿಯಲ್ಲಿ ಸಾರ್ವಜನಿಕರಿಗೆ ಪಡಿತರ ನೀಡಲು ಹಣ ಪಡೆದರೆ ನ್ಯಾಯಬೆಲೆ ಅಂಗಡಿಯ ಪರವಾನಿಗೆಯನ್ನು ಶಾಶ್ವತವಾಗಿ ರದ್ದುಗೊಳಿಸಲಾಗುತ್ತಿದೆ. ಹೀಗಂತ ಆಹಾರ ಮತ್ತು ನಾಗರೀಕ ಪೂರೈಕೆ ಸಚಿವ ಗೋಪಾಲಯ್ಯ ಎಚ್ಚರಿಕೆ ನೀಡಿದ್ದಾರೆ.ತುಮಕೂರು ಜಿಲ್ಲೆಯಲ್ಲಿ ಆಹಾರ ಪೂರೈಕೆ ಬಗ್ಗೆ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನ್ಯಾಯ ಬೆಲೆ ಅಂಗಡಿಗಳವರು ಇಂತಹ ಸಂದರ್ಭದಲ್ಲಿ ಮಾನವೀಯತೆ ತೋರಿ, ಪಡಿತರವನ್ನು ಬಡವರಿಗೆ ಸರಿಯಾಗಿ ಹಂಚಬೇಕು. ಸಮಯ ಮಿತಿ ಇಲ್ಲದೆ ಪಡಿತರ ವಿತರಿಸಬೇಕು ಎಂದು ಪಡಿತರ