ಜೆಡಿಎಸ್ ನ ಶಾಸಕನಿಗೆ ಮತ ನೀಡಿದ ಮತದಾರನಿಂದಲೇ ಜೀವ ಬೆದರಿಕೆ

ಚಿಕ್ಕಬಳ್ಳಾಪುರ, ಶುಕ್ರವಾರ, 9 ನವೆಂಬರ್ 2018 (07:12 IST)

: ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಅವರಿಗೆ  ಮತ ನೀಡಿದ ಮತದಾರನೇ ಕರೆ ಮಾಡಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಪ್ರಾಣ ಬೆದರಿಕೆ ಹಾಕಿದ್ದಾನೆ ಎಂಬುದಾಗಿ ತಿಳಿದುಬಂದಿದೆ.


ಮಾಜಿ ಶಾಸಕ ರಾಜಣ್ಣ ಅವರಿಗೆ ನವೆಂಬರ್ 2 ಹಾಗೂ 3 ರಂದು ಕರೆ ಮಾಡಿರುವ ಆ ವ್ಯಕ್ತಿ ತನ್ನ ಹೆಸರಾಗಲಿ, ಊರಾಗಲಿ ಹೇಳದೆ ತಾನು ನಿನಗೆ ಮತ ನೀಡಿದ ಮತದಾರ ಎಂದು ಹೇಳಿರುವ ಆತ ಅತ್ಯಂತ ಕೀಳು ಮಟ್ಟದ ಭಾಷೆಯಲ್ಲಿ ಏಕವಚನದಲ್ಲಿ ನಿಂದನೆ ಮಾಡಿದ್ದಾನೆ.


ಕಾಂಗ್ರೆಸ್ ಪಕ್ಷದವರಿಂದ ಹಣ ತಿಂದು ಜೆಡಿಎಸ್ ಪಕ್ಷವನ್ನ ಹಾಳು ಮಾಡಿಬಿಟ್ಟೆ ಎಂದು ಕಿಡಿಕಾರಿದ್ದಾನೆ. ಅಲ್ಲದೇ ಏನಾದರೂ ಪೊಲೀಸರಿಗೆ ದೂರು ನೀಡಿದರೆ ಹಾಡಹಗಲೇ ನಿನ್ನ ಮನೆಗೆ ಬಂದು ತಲೆ ಕಡಿಯುತ್ತೇನೆ ಎಂದು ಜೀವ ಬೆದರಿಕೆ ಹಾಕಿದ್ದಾನೆ. ಹೆಚ್ಚೆಂದರೆ ನೀನು ನನ್ನನ್ನು ಜೈಲಿಗೆ ಕಳುಹಿಸುತ್ತೀಯಾ ಅಷ್ಟೆ ತಾನೇ ಎಂದು ಹೇಳಿದ್ದಾನೆ.


ಈ ಕುರಿತು ರಾಜಣ್ಣ ಎಸ್ಪಿ ಕಾರ್ತಿಕ್‍ ರೆಡ್ಡಿ ಅವರನ್ನು ಭೇಟಿ ಮಾಡಿ ಅನಾಮಧೇಯ ಮೊಬೈಲ್ ಕರೆಯ ಆಡಿಯೋ ರೆಕಾರ್ಡ್ ನೀಡಿ, ಆತನ ವಿರುದ್ಧ ದೂರು ನೀಡಿದ್ದಾರೆ ಎಂಬುದಾಗಿ ತಿಳಿದುಬಂದಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಟಿಪ್ಪು ಜಯಂತಿ ಆಚರಣೆ ಹಿನ್ನಲೆ; ಕೊಡಗು ಜಿಲ್ಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ನಿಷೇಧಾಜ್ಞೆ ಜಾರಿ

ಕೊಡಗು : ವಿರೋಧದ ನಡುವೆಯು ರಾಜ್ಯ ಸರ್ಕಾರ ಟಿಪ್ಪು ಜಯಂತಿ ಆಚರಿಸುತ್ತಿರುವ ಕಾರಣ ಟಿಪ್ಪು ಜಯಂತಿ ವಿರೋಧಿ ...

news

ಗಾಲಿ ಜನಾರ್ಧನ ರೆಡ್ಡಿ ಬಿಜೆಪಿಯಲ್ಲಿ ಇಲ್ಲ ಎಂದ ಬಿ ಎಸ್ ವೈ

ಮಾಜಿ ಸಚಿವ ಗಾಲಿ ಜನಾರ್ಧನರೆಡ್ಡಿ ಈಗ ಬಿಜೆಪಿಯಲ್ಲಿ ಇಲ್ಲ. ಅವರ ವಿರುದ್ಧ ಕೇಳಿಬಂದಿರುವ ಆರೋಪಗಳ ಬಗ್ಗೆ ...

news

ಬಿಜೆಪಿ ಗೆಲುವಿನ ಕಡಿವಾಣಕ್ಕೆ ರಾಹುಲ್-ಸಿಎಂ ಭೇಟಿ

ರಾಜ್ಯದ ಐದು ಕ್ಷೇತ್ರಗಳ ಉಪಚುನಾವಣೆಯಲ್ಲಿ ಭರ್ಜರಿ ಗೆಲುವು ದಾಖಲು ಮಾಡಿರುವ ಮೈತ್ರಿ ಪಕ್ಷಗಳು, ಮುಂಬರುವ ...

news

ಡೀಲ್ ಪ್ರಕರಣ: ಜನಾರ್ಧನ ರೆಡ್ಡಿ ಬಂಧನಕ್ಕೆ ನಾಲ್ಕು ತಂಡ ಶೋಧ

ತಲೆ ಮರೆಸಿಕೊಂಡಿರುವ ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿ ಬಂಧನಕ್ಕೆ ಸಿಸಿಬಿಯ ನಾಲ್ಕು ಪೊಲೀಸರ ತಂಡಗಳು ಬಲೆ ...