ಬೈಲಹೊಂಗಲ ಬೈಲೂರು ನಿಷ್ಕಲ ಮಂಟಪದ ನಿಜಗುಣಾನಂದ ಸ್ವಾಮೀಜಿಗೆ ಜೀವ ಬೆದರಿಕೆ ಪತ್ರ ಬಂದಿದ್ದು ಪತ್ರದಲ್ಲಿ ನಿಜಗುಣಾನಂದ ನಾನು ಬರೆದಿರುವ ಪತ್ರ ಪ್ರೇಮ ಪತ್ರ ಅಂತಾದರೂ ತಿಳಿ. ಅಥವಾ ಸಾವಿನ ಪತ್ರವಂತಾದರೂ ತಿಳಿ, ನಾನು ನಿನ್ನ ಜತೆ ತಮಾಷೆ ಮಾಡುತ್ತಿಲ್ಲ. ನೀನು ಆಯೋಜಿಸುವ ಪಾಪದ ಕಾರ್ಯಕ್ರಮದಲ್ಲೇ ನಿನ್ನ ಕಣ್ಣೆದುರಿಗೆ ನಿನ್ನ ಸಾವು ಬರುತ್ತೆ. ಹಿಂದೂ ಧರ್ಮ ದೇವತೆಗಳನ್ನು ನಿಂದಿಸುವ ನೀನು ರಾಕ್ಷಸನೇ ಸರಿ. ನಿನ್ನ ಜೀವನದ ಕೊನೆಯ ಘಟ್ಟದಲ್ಲಿ ನೀನು ನಿಂತಿದ್ದಿಯಾ.