ಬೆಂಗಳೂರು: ಭಾರೀ ಮಳೆಯಿಂದಾಗಿ ಗುಡ್ಡ ಕುಸಿದ ಪರಿಣಾಮ ಚಾರ್ಮಾಡಿ ಘಾಟಿಯಲ್ಲಿ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಇದೀಗ ಲಘು ವಾಹನಗಳ ಸಂಚಾರಕ್ಕೆ ಅನುಮತಿ ನೀಡಲಾಗಿದೆ.ಗುಡ್ಡ, ಮರ ಬಿದ್ದು ರಸ್ತೆ ಬ್ಲಾಕ್ ಆಗಿತ್ತು. ಇದರಿಂದಾಗಿ ವಾಹನ ಸಂಚಾರ ಬಂದ್ ಆಗಿತ್ತು. ಇದೀಗ ರಸ್ತೆಗೆ ಬಿದ್ದ ಮಣ್ಣು ಸರಿಸುವ ಕೆಲಸ ನಡೆದಿದ್ದು, ಲಘು ವಾಹನಗಳ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ.ಬಿಡುವಿಲ್ಲದೇ ಎರಡು ದಿನ ಸುರಿದ ಮಳೆ ನಿನ್ನೆ ಕೊಂಚ ಬಿಡುವು ತೋರಿದ್ದರಿಂದ ಪ್ರಯಾಣಿಕರು ನಿಟ್ಟುಸಿರು ಬಿಡುವಂತಾಗಿದೆ.