ಬೆಂಗಳೂರಿನಲ್ಲಿ ಇಂದು ಸಾಲು ಸಾಲು ಪ್ರತಿಭಟನೆ ಹಾಗೂ ಹೋರಾಟಗಳು ನಡೆಯಲಿವೆ. ಸಂಯುಕ್ತ ಹೋರಾಟ ಸಮಿತಿ ಸೇರಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆ ಹಾಗೂ ರಾಜಭವನ ಚಲೋ ನಡೆಯಲಿವೆ. ಹೀಗಾಗಿ ಬೆಂಗಳೂರಿನ ವಿವಿಧ ಮಾರ್ಗಗಳಲ್ಲಿ ವಾಹನ ಸಂಚಾರ ದಟ್ಟಣೆಯಾಗುವುದು ಖಚಿತ, ಹೀಗಾಗಿ ವಾಹನ ಸವಾರರು ಈ ಕೆಳಗೆ ತಿಳಿಸಿರುವ ಮಾರ್ಗಗಳನ್ನು ಹೊರತುಪಡಿಸಿ ಬೇರೆ ಮಾರ್ಗದಲ್ಲಿ ಸಂಚರಿಸುವುದು ಒಳಿತು.