ಮೈತ್ರಿ ಸರಕಾರದ ಪಕ್ಷವಾಗಿರುವ ಜೆಡಿಎಸ್ ಲೋಕಸಭೆಗೆ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಇಂದು ರಾತ್ರಿ ಬಿಡುಗಡೆಗೊಳಿಸುವ ಸಾಧ್ಯತೆಯಿದೆ.ಸೀಟು ಹಂಚಿಕೆಗಾಗಿ ಕಾಂಗ್ರೆಸ್ ಜತೆ ಜೆಡಿಎಸ್ ನ ಆಂತರಿಕ ತಿಕ್ಕಾಟ ಮುಂದುವರಿದಿದೆ. ಏತನ್ಮಧ್ಯೆ ಜೆಡಿಎಸ್ ಮಹತ್ವದ ಸಭೆ ಕರೆದಿದ್ದು, ಸಭೆ ಬಳಿಕ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಬಹುದು ಎನ್ನಲಾಗಿದೆ.ಮೈಸೂರು ಹಾಗೂ ತುಮಕೂರು ಕ್ಷೇತ್ರಗಳಿಗೆ ಜೆಡಿಎಸ್ ಪಟ್ಟು ಹಿಡಿದಿದೆ. ಇದು ಕೈ ನಾಯಕರಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಈಗಾಗಲೇ ಕಾಂಗ್ರೆಸ್ 7 ಕ್ಷೇತ್ರಗಳನ್ನು ಮಿತ್ರಪಕ್ಷಕ್ಕೆ ಬಿಟ್ಟುಕೊಟ್ಟಿದೆ.ಜೆಡಿಎಸ್