ಬೆಂಗಳೂರು : ಆಯುಧ ಪೂಜೆ ಒಳಗೆ ಪದಾಧಿಕಾರಿಗಳ ಪಟ್ಟಿ ಅಂತಿಮವಾಗಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ದೆಹಲಿಯಲ್ಲಿ ಮಾತನಾಡಿದ ಅವರು, ಪದಾಧಿಕಾರಿಗಳ ಆಯ್ಕೆಯಲ್ಲಿ ಯುವಕರು ಎಂದರೆ ತೀರಾ ಚಿಕ್ಕವರಲ್ಲ, ಅವರಿಗೆ ತಕ್ಕಮಟ್ಟಿಗೆ ಅನುಭವವೂ ಇರಬೇಕು. ಪದಾಧಿಕಾರಿಗಳ ಆಯ್ಕೆ ವಿಚಾರದಲ್ಲಿ ಯಾವ ಗೊಂದಲವೂ ಇಲ್ಲ. ಯಾರೂ ಹಸ್ತಕ್ಷೇಪ ಮಾಡುವುದಿಲ್ಲ ಎಂದು ತಿಳಿಸಿದರು. ದೆಹಲಿಯಲ್ಲಿ ನಾನು ರಾಷ್ಟ್ರೀಯ ನಾಯಕರಾದ ರಣದೀಪ್ ಸಿಂಗ್ ಸುರ್ಜೇವಾಲಾ ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದ್ದೇನೆ