ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬಂದರೆ ದಲಿತರ ಸಾಲಮನ್ನಾ ಮಾಡುವುದಾಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಶೋಷಿತರ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಎಸ್ಸಿ/ಎಸ್ಟಿ ಸಮುದಾಯಕ್ಕೆ ಮೀಸಲಿಟ್ಟ ಹಣದಲ್ಲೇ ಸಾಲ ಮನ್ನಾ ಮಾಡುವುದಾಗಿ ಹೇಳಿದರು. ಎಸ್ಸಿ/ಎಸ್ಟಿ ಸಮುದಾಯದ ಅಭಿವೃದ್ಧಿಗೆ ೭೫೯೦ ಕೋಟಿ ರೂ. ಮೀಸಲಿಡಲಾಗಿದೆ. ಆದರೆ ಬಿಜೆಪಿ ಸರಕಾರ ಈ ಅನುದಾನವನ್ನು ಬೇರೆಯವರಿಗೆ ಬಳಕೆ ಮಾಡಿ ದಲಿತ ಸಮುದಾಯಕ್ಕೆ ಮೋಸ ಮಾಡುತಿದೆ ಎಂದು ಆರೋಪಿಸಿದರು. ನಿಮ್ಮ ಹಣ ಸರಕಾರ ಬೇರೆಯವರಿಗೆ ಖರ್ಚು