ಹುದ್ದೆಗಾಗಿ ಕಾಂಗ್ರೆಸ್ ನಲ್ಲಿ ಲಾಬಿ; ವಿಪಕ್ಷ ನಾಯಕರ ಆಯ್ಕೆಗೆ ಹೈಕಮಾಂಡ್ ಎಂಟ್ರಿ

ಬೆಂಗಳೂರು| pavithra| Last Modified ಭಾನುವಾರ, 25 ಆಗಸ್ಟ್ 2019 (11:34 IST)
ಬೆಂಗಳೂರು : ಸಮ್ಮಿಶ್ರ ಸರ್ಕಾರ ಪತನದ ಬಳಿಕ ಕಾಂಗ್ರೆಸ್ ನಲ್ಲಿ ವಿಧಾನಸಭೆ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕನ ಸ್ಥಾನ ಮತ್ತು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕಾಗಿ ಅನೇಕರಿಂದ ಲಾಬಿ ನಡೆಯುತ್ತಿದ್ದು, ಈ ವಿಚಾರ ಬಗೆಹರಿಯದ ಹಿನ್ನಲೆಯಲ್ಲಿ ಇದೀಗ ವಿಪಕ್ಷ ನಾಯಕರ ಆಯ್ಕೆಗೆ ಹೈಕಮಾಂಡ್ ಎಂಟ್ರಿ ಕೊಡುವ ಸಾಧ್ಯತೆ ಇದೆ ಎನ್ನಲಾಗಿದೆ.
ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿರುವ ವಿಧಾನಸಭೆಯ ವಿರೋಧ ಪಕ್ಷದ ನಾಯಕನ ಸ್ಥಾನದ ಮೇಲೆ ಕಣ್ಣಿಟ್ಟಿದ್ದಾರೆ. ಆದರೆ, ಅವರಿಗೆ ಹುದ್ದೆ ತಪ್ಪಿಸಲು ಅನೇಕರು ಪ್ರಯತ್ನ ನಡೆಸಿದ್ದಾರೆ ಎನ್ನಲಾಗಿದೆ.


ಇನ್ನು ವಿಧಾನಸಭೆ ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ಮಾಜಿ ಸ್ಪೀಕರ್ ಕೆ.ಆರ್. ರಮೇಶ್ ಕುಮಾರ್ ಮತ್ತು ಮಾಜಿ ಸಚಿವ ಹೆಚ್.ಕೆ. ಪಾಟೀಲ್ ಅವರ ನಡುವೆ ಪೈಪೋಟಿ ನಡೆದಿದೆ. ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕನ ಸ್ಥಾನಕ್ಕಾಗಿ ಸಿ.ಎಂ. ಇಬ್ರಾಹಿಂ, ಎಸ್.ಆರ್. ಪಾಟೀಲ್ ನಡುವೆ ಪೈಪೋಟಿ ಇದೆ ಎನ್ನಲಾಗಿದೆ.


ಹಾಗೇ ವಿಧಾನಸಭೆ ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ಪೈಪೋಟಿ ಹೆಚ್ಚಾದ ಹಿನ್ನೆಲೆಯಲ್ಲಿ ಡಿ.ಕೆ. ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕಾಗಿ ಲಾಬಿ ನಡೆಸಿದ್ದಾರೆ ಎನ್ನಲಾಗಿದೆ.

ಇದರಲ್ಲಿ ಇನ್ನಷ್ಟು ಓದಿ :