ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ-2018ರ ಹಿನ್ನೆಲೆಯಲ್ಲಿ ಮತದಾನವು ಆಗಸ್ಟ್ 31 ರಂದು ಹಾಗೂ ಮತ ಎಣಿಕೆ ಸೆಪ್ಟೆಂಬರ್ 3ರಂದು ಸಂಬಂಧಪಟ್ಟ ತಾಲೂಕಿನ ತಾಲೂಕು ಕೇಂದ್ರಗಳಲ್ಲಿ ನಡೆಯಲಿದೆ. ಮುಕ್ತ, ಶಾಂತಿಯುತ ಹಾಗೂ ನ್ಯಾಯ ಸಮ್ಮತ ಚುನಾವಣೆ ನಡೆಸಲು ಸಂತೆ-ಜಾತ್ರೆ, ಮದ್ಯಮಾರಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.ಚುನಾವಣೆ ಜರುಗಲಿರುವ ಕ್ಷೇತ್ರದ ವ್ಯಾಪ್ತಿಯಲ್ಲಿ ಮಾತ್ರ ಮತದಾನ ದಿನವಾದ ಆಗಸ್ಟ್ 31ರಂದು ಎಲ್ಲ ತರಹದ ಸಂತೆ ಹಾಗೂ ಜಾತ್ರೆಗಳನ್ನು ನಿಷೇಧಿಸಲಾಗಿದೆ. ಮತದಾನ