ಸ್ಥಳೀಯ ಚುನಾವಣೆ: ಜೆಡಿಎಸ್ ಜತೆ ಮೈತ್ರಿ ಇಲ್ಲವೆಂದ ಸಿದ್ದರಾಮಯ್ಯ

ಹುಬ್ಬಳ್ಳಿ| Jagadeesh| Last Modified ಗುರುವಾರ, 9 ಆಗಸ್ಟ್ 2018 (13:58 IST)
ರಾಜ್ಯದ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಯಾವುದೇ ಮೈತ್ರಿ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು, ಮೈತ್ರಿ ವಿಚಾರ ಜಿಲ್ಲಾ ಮಟ್ಟದ ನಾಯಕರಿಗೆ ಬಿಟ್ಟಿದ್ದು. ಇನ್ನು ಲೋಕಸಭೆ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಳ್ಳುವ ವಿಚಾರ ಸಮನ್ವಯ ಸಮಿತಿ ಸಭೆಯಲ್ಲಿ ತೀರ್ಮಾನವಾಗುತ್ತದೆ ಎಂದರು.

ಬಹುತೇಕವಾಗಿ ಲೋಕಸಭೆ ಚುನಾವಣೆಯಲ್ಲಿ ಅಲಯನ್ಸ್ ಆಗುತ್ತೆ ಎಂದೂ ಮುನ್ಸೂಚನೆಯನ್ನು ಮಾಜಿ ಸಿಎಂ ನೀಡಿದ್ದಾರೆ. ಕಾಂಗ್ರೆಸ್ ಮತ್ತು ಜೆಡಿಎಸ್ ಸಮನ್ವಯತೆಯಿಂದ ನಡೆಯಬೇಕು. ರಾಜ್ಯದಲ್ಲಿ ಸರಕಾರ ಉತ್ತಮ ಆಡಳಿತ ನೀಡುತ್ತಿದೆ ಎಂದು ಹೇಳಿದ್ದಾರೆ.

ಇದರಲ್ಲಿ ಇನ್ನಷ್ಟು ಓದಿ :