ಸಿದ್ದರಾಮಯ್ಯ ಬರೀ ಬುರುಡೆ ಬಿಡುತ್ತಾರೆ. ಅವರ ಬುರುಡೆ ಮಾತಿಗೆ ಜನರು ತಕ್ಕ ಪಾಠ ಕಲಿಸಿದ್ದಾರೆ. ಇನ್ನಾದರೂ ಸಿದ್ದರಾಮಯ್ಯ ತಮ್ಮ ಜ್ಯೋತಿಷ್ಯಾಲಯಕ್ಕೆ ಬೀಗ ಹಾಕಿ ಮನೆಗೆ ಹೋಗುವುದು ಒಳಿತು. ಹೀಗಂತ ಕಂದಾಯ ಸಚಿವ ಆರ್.ಅಶೋಕ್ ಲೇವಡಿ ಮಾಡಿದ್ರು.ರಾಜ್ಯದಲ್ಲಿ ಸುಭದ್ರ ಸರ್ಕಾರ ಮುಂದುವರೆಯಲಿ ಎಂಬುದು ಜನತೆಯ ಆಶಯವಾಗಿದೆ. ಸಮೀಕ್ಷೆ ಮೀರಿ ಬಿಜೆಪಿಗೆ ದೊಡ್ಡ ಗೆಲುವು ಸಿಕ್ಕಿದೆ. ಗೆದ್ದವರಿಗೆ ನಾವು ಮಾತು ಕೊಟ್ಟಂತೆಯೇ ನಡೆದುಕೊಳ್ಳುತ್ತೇವೆ. ಸೋತವರ ಬಗ್ಗೆ ಪಕ್ಷದ ವರಿಷ್ಠರು ನಿರ್ಧಾರ ಕೈಗೊಳ್ಳಲಿದ್ದಾರೆ ಎಂದಿದ್ದಾರೆ.ಬಿಜೆಪಿಯಲ್ಲಿ