ಕೊರೊನಾ ವೈರಸ್ ನಿಯಂತ್ರಣಕ್ಕೆ ದೇಶಾದ್ಯಂತ ಲಾಕ್ ಡೌನ್ ಮುಂದುವರಿಸಲಾಗಿದೆ. ಏತನ್ಮಧ್ಯೆ ರಂಜಾನ್ ಆಚರಣೆ ಬಂದಿದ್ದು ಈ ಕುರಿತು ಮುಸ್ಲಿಂ ಮುಖಂಡರು ಸ್ಪಷ್ಟನೆ ನೀಡಿದ್ದಾರೆ. ಕೊರೊನಾ ಸೋಂಕು ತಡೆ ಹಿನ್ನೆಲೆ ಇದೀಗ ಕೇಂದ್ರ ಸರ್ಕಾರ ಮೇ 3 ರ ವರೆಗೆ ಲಾಕ್ಡೌನ್ ವಿಸ್ತರಿಸಿದೆ. ಲಾಕ್ಡೌನ್ ಮುಗಿಯುವವರೆಗೂ ಮಸೀದಿಗಳಲ್ಲಿ ಸಾಮೂಹಿಕ ಪ್ರಾರ್ಥನೆಯನ್ನ ನಿಲ್ಲಿಸಲು ಸರ್ಕಾರ ಸೂಚಿಸಿದೆ. ಈ ನಡುವೆ ರಂಜಾನ್ ತಿಂಗಳಲ್ಲೂ ಲಾಕ್ಡೌನ್ ನಿಯಮಗಳನ್ನ ಕಡ್ಡಾಯವಾಗಿ ಪಾಲನೆ ಮಾಡುವಂತೆ ಉಡುಪಿ ಜಿಲ್ಲಾ ಮುಸ್ಲಿಂ