ಹೊರ ರಾಜ್ಯಗಳಿಂದ ಹಾಗೂ ಹೊರ ಜಿಲ್ಲೆಗಳಿಂದ ಬಂದವರಿಂದ ಕೊರೊನಾ ಕೇಸ್ ಗಳು ಹೆಚ್ಚಾಗುತ್ತಿವೆ. ಹೀಗಾಗಿ ರಾಜ್ಯದಲ್ಲಿ ಮತ್ತೊಮ್ಮೆ ಲಾಕ್ ಡೌನ್ ಜಾರಿಯಾಗುತ್ತಾ ಎನ್ನುವ ಚರ್ಚೆ ಶುರುವಾಗಿದೆ. ವಿಧಾನಸೌಧದ ಕ್ಯಾಬಿನೆಟ್ ಸಭಾಂಗಣದಲ್ಲಿ ಟಾಸ್ಕ್ ಫೋರ್ಸ್ ನ ತಜ್ಞರು ಸಚಿವರ ಜೊತೆಗೆ ಸುದೀರ್ಘ ಮಾತುಕತೆ ನಡೆಸಿದ್ದಾರೆ. ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಮಾತನಾಡಿದ್ದು, ಕೊರೊನಾ ನಿಗ್ರಹಕ್ಕೆ ಟಾಸ್ಕ್ ಫೋರ್ಸ್ ನೀಡಿದ ಸಲಹೆಗಳನ್ನು ಸರಕಾರ ಪರಿಶೀಲನೆ ನಡೆಸುತ್ತಿದೆ. ಹೆಚ್ಚಿನ ಪ್ರಮಾಣದಲ್ಲಿ ಕೊರೊನಾ ಪರೀಕ್ಷೆ, ಖಾಸಗಿ