ಲಾಕ್ ಡೌನ್ ವಿನಾಯಿತಿ ಮೇ 3 ರಿಂದ ನೀಡುವುದರಿಂದ ಕೋವಿಡ್ ಪ್ರಕರಣಗಳು ಹೆಚ್ಚಾಗಬಹುದು. ಕೋವಿಡ್ -19 ರೋಗ ನಿಯಂತ್ರಣಕ್ಕೆ ಬರುತ್ತಿದೆ ಎಂದು ಉದಾಸೀನತೆ ತೋರುವಂತಿಲ್ಲ. ಪ್ರತಿಯೊಬ್ಬರೂ ಹೆಚ್ಚು ಜಾಗ್ರತೆ ವಹಿಸಬೇಕು ಎಂದು ರಾಜ್ಯ ಮುಖ್ಯ ಕಾರ್ಯದರ್ಶಿ ಟಿ.ಎಂ ವಿಜಯ್ಭಾಸ್ಕರ್ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳೊಡನೆ ವೀಡಿಯೋ ಸಂವಾದ ನಡೆಸಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಕೇವಲ ಒಬ್ಬ ವ್ಯಕ್ತಿಯಿಂದ 24 ಜನರಿಗೆ ಕೊರೋನಾ ಸೋಂಕು ಹರಡಿದೆ. ಇದೇ ರೀತಿ