ಮಹಾಮಾರಿ ಕೊರೋನಾ ಸಾಂಕ್ರಾಮಿಕ ಸೋಂಕು ಹರಡದಂತೆ ಮುಂಜಾಗ್ರತವಾಗಿ ಲಾಕ್ ಡೌನ್ ಜಾರಿಗೊಳಿಸಲಾಗಿದೆ. ಆರಂಭದಿಂದ ಇಲ್ಲಿಯವರೆಗೆ ಲಾಕ್ ಡೌನ್ ಉಲ್ಲಂಘಿಸಿದ ಕಲಬುರಗಿ ಜಿಲ್ಲೆಯ 118 ಜನರ ವಿರುದ್ಧ ರೌಡಿ ಶೀಟ್ ತೆರೆಯಲಾಗಿದೆ ಎಂದು ಕಲಬುರಗಿ ಜಿಲ್ಲಾ ಪೊಲೀಸ್ ಅಧೀಕ್ಷಕ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ತಿಳಿಸಿದ್ದಾರೆ.ಕಲಬುರಗಿ ನಗರ ಪೊಲೀಸ್ ಆಯುಕ್ತಾಲಯದ ವ್ಯಾಪ್ತಿ ಹೊರತುಪಡಿಸಿ ಜಿಲ್ಲೆಯ ಆಳಂದ, ಅಫಜಲಪೂರ, ಜೇವರ್ಗಿ, ಚಿತ್ತಾಪೂರ, ಶಹಾಬಾದ, ಸೇಡಂ, ಮತ್ತು ಚಿಂಚೋಳಿ ತಾಲ್ಲೂಕಾಗಳ ವ್ಯಾಪ್ತಿಯಲ್ಲಿ ಲಾಕ್ ಡೌನ್ ಉಲ್ಲಂಘಿಸಿದವರ