ಲೋಕಸಭಾ ಚುನಾವಣೆಯ ಹಿನ್ನಲೆ; ರಾಜ್ಯದಲ್ಲಿ ಈ ಮೂರು ದಿನಗಳ ಕಾಲ ಮದ್ಯಕ್ಕೆ ಬ್ರೇಕ್ ಹಾಕಿದ ಆಯೋಗ

ಬೆಂಗಳೂರು, ಮಂಗಳವಾರ, 16 ಏಪ್ರಿಲ್ 2019 (10:30 IST)

ಬೆಂಗಳೂರು : ಚುನಾವಣೆಯ ಬಹಿರಂಗ ಪ್ರಚಾರ ಇಂದು ಮುಕ್ತಾಯವಾಗಲಿದ್ದು , ರಾಜ್ಯದಲ್ಲಿ ಏ. 18 ರಂದು ಮೊದಲ ಹಂತದ ಮತದಾನ ನಡೆಯಲಿದೆ. ಈ ಹಿನ್ನಲೆಯಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಬಾರ್ ಬಂದ್ ಮಾಡುವಂತೆ ಚುನಾವಣಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.


ಲೋಕಸಭಾ ಚುನಾವಣೆಯ ಬಹಿರಂಗ ಪ್ರಚಾರ ಇಂದು ಸಂಜೆ 5 ಗಂಟೆಗೆ ಮುಕ್ತಾಯವಾಗಲಿದ್ದು, ದಕ್ಷಿಣ ಕನ್ನಡ, ಉಡುಪಿ- ಚಿಕ್ಕಮಗಳೂರು, ಹಾಸನ, ಚಿತ್ರದುರ್ಗ, ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ, ಚಿಕ್ಕಬಳ್ಳಾಪುರ ಹಾಗೂ ಕೋಲಾರದಲ್ಲಿ ಮತದಾನ ಮುಕ್ತಾಯಕ್ಕೆ 48 ತಾಸು ಮುನ್ನ ಅಂದರೆ ಇಂದು ಸಂಜೆ 5 ಗಂಟೆಗೆ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದೆ.


ಬಹಿರಂಗ ಪ್ರಚಾರಕ್ಕೆ ತೆರೆಬಿದ್ದ ಬಳಿಕ ಅಭ್ಯರ್ಥಿಗಳು ಹಾಗೂ ಅವರ ಬೆಂಬಲಿಗರು ಮನೆ ಮನೆ ಪ್ರಚಾರ ನಡೆಸಲಿದ್ದು, ಈ ವೇಳೆ ಮತದಾರರಿಗೆ ನಾನಾ ಆಮಿಷಗಳನ್ನು ಒಡ್ಡುವ ಸಾಧ್ಯತೆಯಿದೆ. ಈ ರೀತಿ ಅಕ್ರಮಗಳನ್ನು ತಡೆಯುವ ಸಲುವಾಗಿ ಚುನಾವಣಾ ಆಯೋಗ ಸಿದ್ಧತೆ ನಡೆಸಿದ್ದು, ಈ ನಿಟ್ಟಿನಲ್ಲಿ ಚುನಾವಣಾ ಆಯೋಗ ಇಂದು ಸಂಜೆಯಿಂದ ಮೂರು ದಿನಗಳ ಕಾಲ ಸಂಪೂರ್ಣ ಬಂದ್ ಮಾಡಲು ಆದೇಶಿಸಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.
 



ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ನಿನ್ನ ಶಿಶ್ನ ಚಿಕ್ಕದಾಗಿದೆ ಎಂದು ಗೆಳತಿ ಹೇಳಿದ್ದಕ್ಕೆ ಆತ ಮಾಡಿದ್ದೇನು ಗೊತ್ತಾ?

ಚೀನಾ : ಲೈಂಗಿಕ ಕ್ರಿಯೆಯ ವಿಚಾರದ ಬಗ್ಗೆ ಪುರುಷರಿಗೆ ಹೀಯಾಳಿಸಿದರೆ ಅವರು ಖಿನ್ನತೆಗೆ ಒಳಗಾಗುತ್ತಾರೆ ...

news

ಮುಟ್ಟು ಆಗುವ ಮೊದಲು ಮತ್ತು ನಂತರದ ಕೆಲವು ಅವಧಿಯಲ್ಲಿ ಲೈಂಗಿಕ ಕ್ರಿಯೆ ಮಾಡಿದರೆ ಗರ್ಭಿಣಿಯಾಗುವುದಿಲ್ಲವಂತೆ. ಇದು ನಿಜವೇ ?

ಬೆಂಗಳೂರು : ಪ್ರಶ್ನೆ : ನಾನು ಮತ್ತು ನನ್ನ ಸಂಗಾತಿ ಮುಂದಿನ ತಿಂಗಳು ಮದುವೆಯಾಗಲು ನಿರ್ಧರಿಸಿದ್ದೇವೆ. ...

news

ಮುಖದಲ್ಲಿ ಹೆಚ್ಚು ಕೂದಲಿಲ್ಲವಾದರೆ ಅಂತವರು ಲೈಂಗಿಕ ಅಸಮರ್ಥರೇ?

ಬೆಂಗಳೂರು : ಪ್ರಶ್ನೆ : ನನಗೆ 23 ವರ್ಷ. ನನಗೆ ಮುಖದಲ್ಲಿ ಹೆಚ್ಚು ಕೂದಲಿಲ್ಲ. ನನಗಿಂತ ಕಿರಿಯರಿಗೆ ಹೆಚ್ಚು ...

news

ರಾಜ್ಯದಲ್ಲಿರುವುದು ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರವಲ್ಲ, ದೇವೇಗೌಡರ ಕುಟುಂಬದ ಸರ್ಕಾರ- ರೇಣುಕಾಚಾರ್ಯ ಕಿಡಿ

ದಾವಣಗೆರೆ : ಬಿಜೆಪಿಯ ಮಾಜಿ ಸಚಿವ ರೇಣುಕಾಚಾರ್ಯ ಅವರು ಕಾಂಗ್ರೆಸ್ ಪಕ್ಷವನ್ನು ಕ್ಯಾನ್ಸರ್ ಗೆ ಹಾಗು ...