ಬೆಂಗಳೂರು: ಲೋಕಸಭೆಯ ಐದು ಕ್ಷೇತ್ರಗಳಿಗೆ ಇಂದು ಉಪಚುನಾವಣೆ ನಡೆಯುತ್ತಿದ್ದು, ಬೆಳಗ್ಗಿನಿಂದಲೇ ಮತದಾನ ಪ್ರಕ್ರಿಯೆ ಆರಂಭವಾಗಿದೆ.ಶಿವಮೊಗ್ಗ ಕ್ಷೇತ್ರದ ಅಭ್ಯರ್ಥಿಯಾಗಿರುವ ಬಿಎಸ್ ಯಡಿಯೂರಪ್ಪ ಪುತ್ರ ಬಿವೈ ರಾಘವೇಂದ್ರ ಬೆಳಿಗ್ಗೆಯೇ ದೇವಾಲಯಕ್ಕೆ ತೆರಳಿ ಪೂಜೆ ಸಲ್ಲಿಸಿ ಬಳಿಕ ತಂದೆ ಯಡಿಯೂರಪ್ಪ ಹಾಗೂ ಕುಟುಂಬ ಸಮೇತ ಮತದಾನ ಮಾಡಿದರು. ಶಿವಮೊಗ್ಗ ಲೋಕಸಭೆ ಕ್ಷೇತ್ರದ ಕೆಲವು ಗ್ರಾಮಗಳಲ್ಲಿ ಮೂಲ ಸೌಕರ್ಯ ಒದಗಿಸಬೇಕೆಂದು ಆಗ್ರಹಿಸಿ ಗ್ರಾಮಸ್ಥರು ಮತದಾನ ಬಹಿಷ್ಕರಿಸಿದ ಘಟನೆಯೂ ನಡೆದಿದೆ.ಮಂಡ್ಯ ಕ್ಷೇತ್ರದಲ್ಲಿ ತಾಳಗುಪ್ಪದಲ್ಲಿ ಮತ ಯಂತ್ರದಲ್ಲಿ ದೋಷ