Widgets Magazine

ಲೋಕಾಯುಕ್ತರಾಗಿ ನ್ಯಾ. ನಾಯಕ್ ನೇಮಕ ವಿಚಾರ: ರಾಜ್ಯಪಾಲರೊಂದಿಗೆ ಸಿಎಂ ಚರ್ಚೆ

ಬೆಂಗಳೂರು| Rajesh patil| Last Modified ಶನಿವಾರ, 27 ಫೆಬ್ರವರಿ 2016 (19:10 IST)
ನೂತನ ಲೋಕಾಯುಕ್ತರ ನೇಮಕ ಕುರಿತಂತೆ ಮುಖ್ಯಮಂತ್ರಿ ರಾಜ್ಯಪಾಲ ವಜುಭಾಯಿ ವಾಲಾ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸ್ಥಾನಕ್ಕೆ ನ್ಯಾಯಮೂರ್ತಿ ಎಸ್.ಆರ್.ನಾಯಕ್ ನೇಮಕ ವಿಚಾರ ಕುರಿತಂತೆ ರಾಜ್ಯಪಾಲರಿಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ ವಿವರಣೆ ನೀಡಿದ್ದಾರೆ. ನ್ಯಾ.ನಾಯಕ್, ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾಗಿ, ಕಾನೂನು ಆಯೋಗದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ ಎಂದು ತಿಳಿಸಿದ್ದಾರೆ.

ನಾಯಕ್ ವಿರುದ್ಧ ಯಾವುದೇ ಗಂಭೀರ ಆರೋಪಗಳಿಲ್ಲ. ಆದರೆ, ದುರುದ್ದೇಶಪೂರ್ವಕವಾಗಿ ಅವರ ವಿರುದ್ಧ ಆರೋಪ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ವಿವರಣೆ ಆಲಿಸಿದ ರಾಜ್ಯಪಾಲ ವಜುಭಾಯಿ ವಾಲಾ, ಎಲ್ಲವನ್ನು ಪರಿಶೀಲಿಸುವುದಾಗಿ ಪ್ರತಿಕ್ರಿಯೆ ನೀಡಿದ್ದಾರೆ.ಇದರಲ್ಲಿ ಇನ್ನಷ್ಟು ಓದಿ :