ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಲೋಕಾಯುಕ್ತ ಅಧಿಕಾರಿಗಳು ಬೆಳ್ಳಂಬೆಳಗ್ಗೆ ಹಲವು ಸರ್ಕಾರಿ ಅಧಿಕಾರಿಗಳ ಮನೆ ಮೇಲೆ ಮಾಡಿದ್ದು, ಶೋಧ ಕಾರ್ಯ ನಡೆಸಿದ್ದಾರೆ. ಕುಂದಣ ಪಿಡಿಒ ಪದ್ಮನಾಬ್ ಅವರಿಗೆ ಸೇರಿದ ಮೂರು ಮನೆ ಮೆನಗಳ ಮೇಲೆ ಅಧಿಕಾರಿಗಳು ದಾಳಿ ಮಾಡಿದ್ದು, ದಾಖಲೆ ಪರಿಶೀಲಿಸುತ್ತಿದ್ದಾರೆ. ಜೊತೆಗೆ ದಾಬಸ್ಪೇಟೆ ಹಾಗೂ ತುಮಕೂರಿನಲ್ಲಿಯೂ ಪದ್ಮನಾಬ್ಗೆ ಸಂಬಂಧಿಸಿದ ಸ್ಥಳಗಳಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ. ಬೆಂಗಳೂರು, ರಾಮನಗರ, ಬಳ್ಳಾರಿ, ಚಿತ್ರದುರ್ಗ ಜಿಲ್ಲೆಗಳ 30 ಸ್ಥಳಗಳ ಮೇಲೆ ಏಕಕಾಲಕ್ಕೆ ದಾಳಿಮಾಡಿದ್ದು, ಶೋಧ ನಡೆಸಲಾಗುತ್ತಿದೆ ಎಂದು ಲೋಕಾಯುಕ್ತಅಧಿಕಾರಿಗಳು ತಿಳಿಸಿದ್ದಾರೆ.