ಶಬ್ದ ಮಾಲಿನ್ಯ ನಿಯಂತ್ರಣಕ್ಕೆ ಸಂಬಂಧಿಸಿ ಸುಪ್ರೀಂ ಕೋರ್ಟಿನ ಆದೇಶದಂತೆ, ರಾಜ್ಯದಲ್ಲಿ ಮಾರ್ಗದರ್ಶಿ ಸೂತ್ರಗಳನ್ನು ಪ್ರಕಟಿಸಲಾಗಿದ್ದು, ಶಬ್ಧ ಮಾಲಿನ್ಯ ನಿಯಂತ್ರಣ ಕಾನೂನನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾತ್ರಿ 10 ಗಂಟೆಯಿಂದ ಬೆಳಗಿನ ಜಾವ 6 ಗಂಟೆಯವರೆಗೆ ಯಾವುದೇ ಧ್ವನಿವರ್ಧಕಗಳ ಉಪಯೋಗಕ್ಕೆ ಅವಕಾಶ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಅನುಮತಿ ಇಲ್ಲದೆ ಧ್ವನಿವರ್ಧಕ ಗಳನ್ನು ಉಪಯೋಗಿಸುತ್ತಿರುವವರು 15 ದಿನದೊಳಗಾಗಿ