ಚಿಕ್ಕಬಳ್ಳಾಪುರ : ಗೃಹಿಣಿಯನ್ನು ಹತ್ಯೆ ಮಾಡಿ ಪರಾರಿಯಾಗಿದ್ದ ಪ್ರಿಯಕರನನ್ನು ದೊಡ್ಡಬೆಳವಂಗಲ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಮೇ 15 ರಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ವಡಗೆರೆ ಗ್ರಾಮದಲ್ಲಿ ಭಾಗ್ಯಶ್ರೀ(35) ಅವರನ್ನು ಪ್ರಿಯಕರ ರಿಯಾಝ್ ಪಾಷಾ ಮನೆಯಿಂದ ಹೊರಗೆಳೆದು, ಚಾಕುವಿನಿಂದ ಚುಚ್ಚಿ ಹತ್ಯೆ ಮಾಡಿದ್ದ. ನಂತರ ಅಲ್ಲಿಂದ ಪರಾರಿಯಾಗಿದ್ದನು. ಪ್ರಕರಣದ ಜಾಡು ಹಿಡಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಮೃತ ಭಾಗ್ಯಶ್ರೀ ಪತಿ ಚನ್ನಬಸವರಾಜು ಸಂಬಂಧಿಕರ ಗೃಹ ಪ್ರವೇಶಕ್ಕೆ ತೆರಳಿದ್ದರು. ಈ ವೇಳೆ ಭಾಗ್ಯಶ್ರೀ