ಮಂಡ್ಯ : ಜಿಲ್ಲೆಯ ನಾಗಮಂಗಲ ತಾಲೂಕಿನ ಪಿಟ್ಟೆಕೊಪ್ಪಲು ಗ್ರಾಮದಲ್ಲಿ 6 ವರ್ಷದ ಮಗುವನ್ನು ಕೊಂದು ವ್ಯಕ್ತಿ ತಾನು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆಗೆ ತಿರುವು ಸಿಕ್ಕಿದ್ದು, ಪತ್ನಿಯ ಅಕ್ರಮ ಸಂಬಂಧವೇ ಇದಕ್ಕೆ ಪ್ರಮುಖ ಕಾರಣ ಎನ್ನಲಾಗಿದೆ. ಜ.13 ರಂದು ಪಿಟ್ಟೆಕೊಪ್ಪಲು ಗ್ರಾಮದ ಗಂಗಾಧರ್ ತನ್ನ ಮಗ ಜಶ್ವಿತ್ (6) ಜೊತೆಗೆ ಕೆರೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈತನ ಪತ್ನಿ ಸಿಂಧು, ನಂಜುಂಡೇಗೌಡ ಅವರೊಂದಿಗೆ ಅಕ್ರಮ ಸಂಬಂಧ ಹೊಂದಿದ್ದರು ಎನ್ನಲಾಗಿದೆ.