ಮಹತ್ವದ ರಾಜಕೀಯ ಬೆಳವಣಿಗೆ ಕಾಂಗ್ರೆಸ್ ನಲ್ಲಿ ನಡೆದಿದ್ದು, ಕೆಲವು ಕೈ ನಾಯಕರು ಕೈ ಕೈ ಹಿಸುಕಿಕೊಳ್ಳುವಂತೆ ಮಾಡಿದೆ. ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಹೆಸರು ಕೇಳಿಬರುತ್ತಿರುವಾಗಲೇ ಈ ನಡುವೆ ಮಾಜಿ ಗೃಹ ಸಚಿವ ಹಾಗೂ ಲಿಂಗಾಯತ ಸಮುದಾಯದ ಪ್ರಭಾವಿ ನಾಯಕ ಎಂ.ಬಿ.ಪಾಟೀಲ್ ನೂತನ ಕೆಪಿಸಿಸಿ ಅಧ್ಯಕ್ಷರಾಗೋದು ಖಚಿತವಾದಂತಿದೆ. ಹೀಗೊಂದು ಸುದ್ದಿ ಸ್ವತಃ ಕಾಂಗ್ರೆಸ್ ವಲಯದಿಂದಲೇ ಹರಿದಾಡಲಾರಂಭಿಸಿದೆ. ಇದು ಡಿಕೆಶಿ ಟೀಂ ಕೆಂಗಣ್ಣಿಗೆ ಗುರಿಯಾಗಿದೆ. ಸಿಎಂ ಬಿ.ಎಸ್.ಯಡಿಯೂರಪ್ಪ ಲಿಂಗಾಯತರ