ಡಿವೈಎಸ್ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಹಿಂದಿರುವ ಸತ್ಯಾಂಶ ಬಿಜೆಪಿಗೆ ಬೇಕಾಗಿಲ್ಲ. ರಾಜಕೀಯ ಕಾರಣಕ್ಕಾಗಿ ರಾಜೀನಾಮೆ ಕೇಳುತ್ತಿದ್ದಾರೆ ಎಂದು ನಗರಾಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್ ತಿರುಗೇಟು ನೀಡಿದ್ದಾರೆ ಸುಪ್ರೀಂಕೋರ್ಟ್ ಎಂ.ಕೆ. ಗಣಪತಿ ಪ್ರಕರಣವನ್ನು ಸಿಬಿಐಗೆ ವಹಿಸಿದೆ. ಸಿಬಿಐ ತನಿಖೆಗೆ ಸರಕಾರ ಸಂಪೂರ್ಣ ಸಹಕಾರ ನೀಡಲಿದೆ. ಆದಾಗ್ಯೂ ಬಿಜೆಪಿ ನನ್ನ ರಾಜೀನಾಮೆ ಕೇಳುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹಿಂದೆ ಗಣಪತಿ ಆತ್ಮಹತ್ಯೆಯ ಸಿಐಡಿ ತನಿಖೆ ನಡೆಯುತ್ತಿರುವಾಗ, ತನಿಖೆಯ ಮೇಲೆ ಪ್ರಭಾವ ಬೀರದಂತಾಗಲು ನೈತಿಕ ಹೊಣೆ