ಹೈದರಾಬಾದ್: ದಕ್ಷ ಐಪಿಎಸ್ ಅಧಿಕಾರಿ ಮಧುಕರ್ ಶೆಟ್ಟಿ ಅವರು ಹೈದರಾಬಾದ್ನ ಕಾಂಟಿನೆಂಟಲ್ ಆಸ್ಪತ್ರೆಯಲ್ಲಿ ಶುಕ್ರವಾರ ರಾತ್ರಿ ವಿಧಿವಶರಾಗಿದ್ದಾರೆ. ಹೆಚ್1ಎನ್1 ಸೋಂಕು ತಗುಲಿ, ಶ್ವಾಸಕೋಶ ಹಾಗೂ ಜೀರ್ಣಾಂಗ ಸಮಸ್ಯೆಯಿಂದ ಜೀವನ್ಮರಣ ಹೋರಾಟ ನಡೆಸಿದ್ದ ಮಧುಕರ್ ಶೆಟ್ಟಿ ಅವರು ಹೈದರಾಬಾದ್ನ ಕಾಂಟಿನೆಂಟಲ್ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.ಹೆಚ್1ಎನ್1 ನಿಂದ ಬಳಲುತ್ತಿದ್ದ ಮಧುಕರ ಶೆಟ್ಟಿ ಅವರು ಕಳೆದ ಒಂದು ವಾರದಿಂದ ಹೈದರಾಬಾದ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಮೂರು ದಿನಗಳಿಂದ ಅವರು ಪ್ರಜ್ಞೆಯನ್ನು ಕಳೆದುಕೊಂಡಿದ್ದರು.