ಸುಪ್ರೀಂಕೋರ್ಟ್ ನ ಆದೇಶ ಬರುವವರೆಗೆ ಉತ್ತರ ಕನ್ನಡ ಜಿಲ್ಲೆಯ ಗೋಕರ್ಣದ ಮಹಾಬಲೇಶ್ವರ ದೇವಾಲಯವು ರಾಜ್ಯ ಸರ್ಕಾರದ ಸುಪರ್ದಿಯಲ್ಲಿರಲಿದೆ.ಸರಕಾರದ ಕಂದಾಯ ಇಲಾಖೆ ಅಧೀನ ಕಾರ್ಯದರ್ಶಿ (ಮುಜರಾಯಿ) ಬಿ.ಎಸ್.ನಾಗರತ್ನಮ್ಮ ಆದೇಶ ಹೊರಡಿಸಿದ್ದಾರೆ. ಈ ಆದೇಶದನ್ವಯ ದೇವಾಲಯವು ರಾಮಚಂದ್ರಾಪುರ ಮಠಕ್ಕೆ ಹಸ್ತಾಂತರ ಇಲ್ಲ. ಜಿಲ್ಲಾಧಿಕಾರಿ ನೇತೃತ್ವದ ಸಮಿತಿಗೂ ದೇವಾಲಯದಲ್ಲಿ ಯಾವುದೇ ಅಧಿಕಾರ ಇರುವುದಿಲ್ಲ.ಆಡಳಿತಾಧಿಕಾರಿಯಾಗಿ ನೇಮಕಗೊಂಡ ಕೊಲ್ಲೂರು ದೇವಾಲಯದ ಆಡಳಿತಾಧಿಕಾರಿಯೂ ಆಗಿರುವ ಎಚ್.ಹಾಲಪ್ಪ, ದೇವಾಲಯದ ಆಡಳಿತವನ್ನು ನೋಡಿಕೊಳ್ಳಲಿದ್ದಾರೆ. ದೇವಸ್ಥಾನದಲ್ಲಿ ಯಥಾಸ್ಥಿತಿಯನ್ನು ಕಾಪಾಡಿಕೊಳ್ಳುವಂತೆ ಸೆ.7ರಂದು ಸುಪ್ರೀಂಕೋರ್ಟ್ ಆದೇಶಿಸಿತ್ತು.ಅದಕ್ಕೂ