ಮಹಾದಾಯಿ ವಿವಾದ ಇತ್ಯಾರ್ಥಪಡಿಸಲು ಬಿಜೆಪಿಗೆ ನಿಜಕ್ಕೂ ಕಾಳಜಿ ಇದ್ದರೆ ನ್ಯಾಯಾಧೀಕರಣಕ್ಕೆ ಅಫಿಡವಿಟ್ ಸಲ್ಲಿಸಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಕೋಲಾರ ಜಿಲ್ಲೆಯ ಬಾಗೆಪಲ್ಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜಗದೀಶ್ ಶೆಟ್ಟರ್ ಅವರಿಗೆ ಸ್ವಲ್ಪವಾದರೂ ಕಾನೂನಿನ ಜ್ಞಾನ ಇದೆಯೇ? ಒಂದು ರಾಜ್ಯದ ಮುಖ್ಯಮಂತ್ರಿ ಮತ್ತೊಂದು ರಾಜ್ಯದ ಮುಖ್ಯಮಂತ್ರಿಗೆ ಪತ್ರ ಬರೆಯುವುದು ಶಿಷ್ಟಾಚಾರ. ಆದರೆ ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರಿಗೆ ಪತ್ರ