ಮಹದಾಯಿ ವಿಚಾರದಲ್ಲಿ ಮಧ್ಯಸ್ಥಿಕೆ ವಹಿಸಿ ಸಮಸ್ಯೆಯನ್ನು ಇತ್ಯರ್ಥಗೊಳಿಸಬೇಕು ಎಂದು ಕೋರಿ ಮುಖ್ಯಮಂತ್ರಿ ಸಿದ್ದರಾಮ್ಯನವರು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ಮಹದಾಯಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕ, ಗೋವಾ ಹಾಗೂ ಮಹಾರಾಷ್ಟ್ರ ಮುಖ್ಯಮಂತ್ರಿಗಳ ಸಭೆ ಕರೆದು ವಿವಾದವನ್ನು ಇತ್ಯರ್ಥಗೊಳಿಸಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ. ರಾಜ್ಯದಲ್ಲಿ ಬರಗಾಲ ಪರಿಸ್ಥಿತಿ ಇರುವುದರಿಂದ ನ್ಯಾಯಾಧೀಕರಣದ ತೀರ್ಪು ವಿರೋಧಿಸಿ ಧಾರವಾಡ, ಬೆಳಗಾವಿ, ಗದಗ ಹಾಗೂ ಬಾಗಲಕೋಟೆ ಭಾಗದ