ಮಹದಾಯಿ ನ್ಯಾಯಾಧೀಕರಣದ ತೀರ್ಪು ಖಂಡಿಸಿ ಕಳೆದು ಎರಡು ದಿನಗಳಿಂದ ಪ್ರತಿಭಟನೆ ನಡೆಯುತ್ತಿದ್ದು, ಇಂದು ಯಾದಗಿರಿ ನಗರಕ್ಕೆ ಆಗಮಿಸಿದ್ದ ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಅವರ ಕಾರಿಗೆ ಕರವೇ ಕಾರ್ಯಕರ್ತರು ಮುತ್ತಿಗೆ ಹಾಕಿದ್ದಾರೆ. ಮಹದಾಯಿ ನ್ಯಾಯಾಧೀಕರಣದ ತೀರ್ಪು ಖಂಡಿಸಿ ನಿನ್ನೆಯಿಂದ ರೈತ ಪರ ಸಂಘಟನೆಗಳು ಹಾಗೂ ಕನ್ನಡ ಪರ ಸಂಘಟನೆಗಳು ರಾಜ್ಯಕ್ಕೆ ಅನ್ಯಾಯವಾಗಿದೆ ಎಂದು ಪ್ರತಿಭಟನೆ ನಡೆಸುತ್ತಿವೆ. ಇಂದು ಪ್ರಗತಿ ಪರಿಶೀಲನಾ ಸಭೆ ನಿಮಿತ್ತ ನಗರಕ್ಕೆ ಆಗಮಿಸಿದ್ದ ಕಂದಾಯ ಸಚಿವರಿಗೆ