ಮಹದಾಯಿ ಮತ್ತು ಕಳಸಾ ಬಂಡೂರಿ ಕುಡಿಯುವ ಯೋಜನೆ ಜಾರಿಗೆ ಒತ್ತಾಯಿಸಿ ದೆಹಲಿಯಲ್ಲಿ ಕರ್ನಾಟಕ ರೈತ ಸೇನಾ ನೇತೃತ್ವದಲ್ಲಿ ನಡೆಸುತ್ತಿರುವ ಪ್ರತಿಭಟನೆ ಈಗಾಗಲೆ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಏ. 25 ರಂದು ರೈತ ಸೇನಾ ಅಧ್ಯಕ್ಷ ಹಾಗೂ ರೈತ ಮುಖಂಡ ವೀರೇಶ ಸೊಬರದಮಠ ನೇತೃತ್ವದಲ್ಲಿ ನವಲಗುಂದ ಹಾಗೂ ನರಗುಂದ ಭಾಗದ ನೂರಾರು ಹೋರಾಟಗಾರರು ದೆಹಲಿಗೆ ತೆರಳಿದ್ದು, ಕಳೆದ ನಾಲ್ಕು ದಿನಗಳಿಂದ ಮಹದಾಯಿ ಯೋಜನೆ ಜಾರಿಗೆ ರಾಷ್ಟ್ರಪತಿಗಳು ಮಧ್ಯಪ್ರವೇಶಿಸಿ ಪ್ರಧಾನಿಯವರಿಗೆ ಯೋಜನೆ ಜಾರಿ