ಕಳೆದ ನಾಲ್ಕು ದಿನಗಳಿಂದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸ್ಪಷ್ಟನೆಗಾಗಿ ಕಾದಿದ್ದ ಮಹದಾಯಿ ಪ್ರತಿಭಟನಾನಿರತ ರೈತರಿಗೆ ಕೊನೆಗೂ ಸಂಧಾನ ಸಫಲವಾಗದೆ ನಿರಾಶೆಯಾಗಿದೆ. ಮಹದಾಯಿ ಹಾಗೂ ಕಳಸಾ ಬಂಡೂರಿ ಯೊಜನೆ ಜಾರಿಗೆ ಒತ್ತಾಯಿಸಿ ಮಲ್ಲೇಶ್ವರಂನ ಬಿಜೆಪಿ ಕಚೇರಿಯ ಮುಂದೆ ಎದುರು ರೈತರು ನಡೆಸುತ್ತಿರುವ ಆಹೋರಾತ್ರಿ ಧರಣಿ ಮಂಗಳವಾರ ನಾಲ್ಕನೇ ದಿನಕ್ಕೆ ಕಾಲಿರಿಸಿದೆ. ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ರೈತ ಹನುಮಂತಪ್ಪ ತೀವ್ರ ಅಸ್ವಸ್ಥರಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನೂ ಕೆಲ ರೈತರು ಕೂಡಾ ಅಸ್ವಸ್ಥರಾಗಿದ್ದಾರೆ