ಸಚಿವ ಡಿ.ಕೆ. ಶಿವಕುಮಾರ್ ಗೆ ಬಹಿಷ್ಕಾರ ಹಾಕುವುದಾಗಿ ಎಚ್ಚರಿಕೆ ನೀಡಿದ ಮಹಾಂತ ಶಿವಾಚಾರ್ಯ ಸ್ವಾಮೀಜಿ

ಕಲಬುರಗಿ| pavithra| Last Modified ಶುಕ್ರವಾರ, 19 ಅಕ್ಟೋಬರ್ 2018 (14:21 IST)
ಕಲಬುರಗಿ : ಪ್ರತ್ಯೇಕ ಲಿಂಗಾಯತ ಧರ್ಮ ವಿಚಾರವಾಗಿ ಸಚಿವ ಡಿ.ಕೆ. ಶಿವಕುಮಾರ್ ಗುರುವಾರ ಕ್ಷಮೆಯಾಚಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ
ಇದೀಗ
ಶ್ರೀ ಶೈಲ ಸಾರಂಗಧರ ಮಠದ ಜಗದ್ಗುರು ಮಹಾಂತ ಶಿವಾಚಾರ್ಯ ಸ್ವಾಮೀಜಿ ಅವರು ಸಚಿವ ಡಿ.ಕೆ.ಶಿವಕುಮಾರ್ ಬಹಿಷ್ಕಾರ
ಹಾಕುವುದಾಗಿ
ಎಚ್ಚರಿಕೆ ನೀಡಿದ್ದಾರೆ.

ಕಲಬುರ್ಗಿಯಲ್ಲಿ ಮಾತನಾಡಿರುವ ಮಹಾಂತ ಶಿವಚಾರ್ಯ ಸ್ವಾಮೀಜಿ ಅವರು,’ ಡಿಕೆಶಿ ಸಿಎಂ ಆಗಬೇಕೆಂಬ ದುರಾಸೆಯಿಂದ ಸ್ವಾಮೀಜಿಯೊಬ್ಬರನ್ನು ಒಳಿಸಿಕೊಳ್ಳಬೇಕೆಂದು ಹೇಳಿಕೆ ಕೊಟ್ಟಿದ್ದಾರೆ. ಸಚಿವ ಡಿ.ಕೆ. ಶಿವಕುಮಾರ್ ಈ ರೀತಿ ಹೇಳಿಕೆ ನೀಡಿದ್ರೆ, ಉತ್ತರ ಕರ್ನಾಟಕಕ್ಕೆ ಬರದಂತೆ ಬಹಿಷ್ಕಾರ ಹಾಕಬೇಕಾಗುತ್ತದೆ ಎಂದು ಸ್ವಾಮೀಜಿಗಳು ಎಚ್ಚರಿಕೆ ನೀಡಿದ್ದಾರೆ.


ಹಾಗೇ ಸಚಿವ ಡಿ.ಕೆ.ಶಿವಕುಮಾರ್ ಗೂ ಲಿಂಗಾಯತ ಧರ್ಮಕ್ಕೂ ಯಾವುದೇ ಸಂಬಂಧವಿಲ್ಲ. ಅವರು ಒಕ್ಕಲಿಗ ಸಮಾಜದಲ್ಲಿ ಎಷ್ಟು ಕಾಂಗ್ರೆಸ್ ವೋಟ್ ತಂದಿದ್ದಾರೆ ಎಂಬುದನ್ನು ತಿಳಿದುಕೊಳ್ಳಬೇಕು’ ಎಂದು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾಮೊಬೈಲ್ ಆ್ಯಪ್
ಡೌನ್‍ ಲೋಡ್ ಮಾಡಿಕೊಳ್ಳಿ.


ಇದರಲ್ಲಿ ಇನ್ನಷ್ಟು ಓದಿ :