ಬೆಂಗಳೂರು : ಮಹಾರಾಷ್ಟ್ರದಲ್ಲಿರುವ ಬಿಜೆಪಿ ಡಬಲ್ ಎಂಜಿನ್ ಸರ್ಕಾರ ಪದೇ ಪದೆ ಕಾಲುಕೆರೆದು ಕಿತಾಪತಿ ಮಾಡುತ್ತಿದೆ. ಚೀನಾ ಮನಸ್ಥಿತಿಯ ಆ ರಾಜ್ಯವು ಕರ್ನಾಟಕವನ್ನು ಶತ್ರು ದೇಶದಂತೆ ನೋಡುತ್ತಿದೆ. ಕೇಂದ್ರ ಬಿಜೆಪಿ ಸರ್ಕಾರ ಇದನ್ನೆಲ್ಲಾ ನೋಡಿಕೊಂಡು ಮೌನವಾಗಿದೆ. ಇದು ಒಕ್ಕೂಟ ವ್ಯವಸ್ಥೆಯ ಅವಸಾನಕ್ಕೆ ಕಾರಣವಾಗಬಹುದು ಎಂದು ಮಾಜಿ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿ ಎಚ್ಚರಿಕೆ ನೀಡಿದ್ದಾರೆ. ಗಡಿ ಹಳ್ಳಿಗಳ ಜನರಿಗೆ ವಿಮಾ ಯೋಜನೆ ಜಾರಿ ಮಾಡುವ ಮಹಾರಾಷ್ಟ್ರ ಸರ್ಕಾರದ ವಿವಾದಾಸ್ಪದ ಕ್ರಮಕ್ಕೆ