ದುಷ್ಕರ್ಮಿಗಳು ಸೇರಿಕೊಂಡು ಮಹಾತ್ಮ ಗಾಂಧಿ ಪ್ರತಿಮೆಯನ್ನು ನೆಲಕ್ಕುರುಳಿಸಿ ಒಡೆದು ಹಾಕಿ ವಿಕೃತಿ ಮೆರೆದಿದ್ದಾರೆ. ಅಮ್ರೇಲಿಯ ಹರಿಕೃಷ್ಣ ಕೆರೆ ಬಳಿ ಘಟನೆ ನಡೆದಿದ್ದು, ಮಹಾತ್ಮ ಗಾಂಧಿ ಪ್ರತಿಮೆಯನ್ನು ಒಡೆದು ಹಾಕಿ ಪರಾರಿಯಾಗಿದ್ದಾರೆ.ದುಷ್ಕರ್ಮಿಗಳ ವಿರುದ್ಧ ಲಾತಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.ಗಾಂಧಿ ಪ್ರತಿಮೆ ಧ್ವಂಸಗೊಳಿಸಿ ಅವಮಾನ ಮಾಡಿರೋ ಕಿಡಿಗೇಡಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.