ನವದೆಹಲಿ: ಮಂಡಿನೋವಿನಿಂದ ಬಳಲುತ್ತಿರುವ ಕಾಂಗ್ರೆಸ್ ಮುಖಂಡ, ಸಂಸದ ಮಲ್ಲಿಕಾರ್ಜುನ ಖರ್ಗೆ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ತೀವ್ರ ಮಂಡಿನೋವಿನಿಂದ ಬಳಲುತ್ತಿರುವ ಖರ್ಗೆ ಶಸ್ತ್ರಚಿಕಿತ್ಸೆಗೊಳಗಾಗಲಿದ್ದಾರೆ. ಈ ಹಿನ್ನಲೆಯಲ್ಲಿ ಅವರು ನವದೆಹಲಿಯಲ್ಲಿರುವ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಮೊದಲೇ ಅವರು ಮಂಡಿನೋವಿಗೆ ಚಿಕಿತ್ಸೆ ಪಡೆಯುತ್ತಿದ್ದರು.ಆದರೆ ಇದೀಗ ಮಂಡಿನೋವು ಉಲ್ಬಣಿಸಿದ ಹಿನ್ನಲೆಯಲ್ಲಿ ಶಸ್ತ್ರ ಚಿಕಿತ್ಸೆಗೊಳಗಾಗಲಿದ್ದಾರೆ. ಆ ಮೂಲಕ ಮುಂಬರುವ ಚುನಾವಣೆ ವೇಳೆಗೆ ಫಿಟ್ ಆಗಲು ಶಸ್ತ್ರಚಿಕಿತ್ಸೆ ಪಡೆಯಲಿದ್ದಾರೆ.http://kannada.fantasycricket.webdunia.com ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್