ಕಳೆದ 40 ತಿಂಗಳುಗಳಿಂದ ಪ್ರಧಾನಿ ಮೋದಿ ಸರಕಾರಕ್ಕೆ ಇದ್ದ ರೈಲುಗಳನ್ನೇ ಓಡಿಸಲು ಆಗುತ್ತಿಲ್ಲ. ಬುಲೆಟ್ ರೈಲು ತರುವ ಬಗ್ಗೆ ಮಾತನಾಡುತ್ತಾರೆ ಎಂದು ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ್ ಖರ್ಗೆ ವಾಗ್ದಾಳಿ ನಡೆಸಿದ್ದಾರೆ. ವಿಧಾನಸೌಧದಲ್ಲಿ ಆಯೋಜಿಸಲಾದ ದೇವರಾಜ ಅರಸು ಕಾರ್ಯಕ್ರಮದಲ್ಲಿ ಪ್ರಶಸ್ತಿ ಸ್ವೀಕರಿಸಿದ ನಂತರ ಮಾತನಾಡಿದ ಅವರು, ಕಳೆದ 40 ತಿಂಗಳಲ್ಲಿ 27 ಭಾರಿ ರೈಲು ಅಪಘಾತಗಳಾಗಿವೆ. 500 ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ, 1000 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.