ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ಸಂಬಂಧ ಚಟವಟಿಕೆಗಳು ಬಿರುಸಿನಿಂದ ಸಾಗಿದ್ದು, ನಾಯಕರು ತಮಗೆ ಸಚಿವ ಸ್ಥಾನ ಕೊಡುವಂತೆ ಒತ್ತಡ ಹೇರುವುದು ಸಾಮಾನ್ಯವಾಗಿದೆ.ಇದೀಗ ಲೋಕಸಭೆ ವಿಪಕ್ಷ ನಾಯಕರಾಗಿರುವ ಮಲ್ಲಿಕಾರ್ಜುನ ಖರ್ಗೆ ಹಿರಿಯ ಶಾಸಕ ರಾಮಲಿಂಗಾ ರೆಡ್ಡಿ ಪರ ಲಾಬಿ ನಡೆಸಿದ್ದಾರೆ. ರಾಮಲಿಂಗಾರೆಡ್ಡಿಗೆ ಸಚಿವ ಸ್ಥಾನ ನೀಡುವಂತೆ ಖರ್ಗೆ ಒತ್ತಾಯಿಸಿದ್ದಾರೆ.ರಾಮಲಿಂಗಾರೆಡ್ಡಿಗೆ ಬೆಂಗಳೂರಿನ ಮೂರು ನಾಲ್ಕು ಕ್ಷೇತ್ರಗಳ ಮೇಲೆ ಹೆಚ್ಚು ಹಿಡಿತವಿದೆ. ಅವರನ್ನು ಸಂಪುಟಕ್ಕೆ ಸೇರಿಸಿಕೊಂಡರೆ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಪಕ್ಷಕ್ಕೆ ಲಾಭವಾಗಲಿದೆ.