ಬಳ್ಳಾರಿ ಜಿಲ್ಲೆಯ ಕೂಡ್ಲಿಗಿಯ ಪ್ರಸಿದ್ಧ ಶ್ರೀ ಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿಗಳು ಇಹಲೋಕ ತ್ಯಜಿಸಿದ್ದಾರೆ. 99 ವರುಷದ ಶ್ರೀಗಳು ಇಂದು ಬೆಳಗ್ಗೆ ಲಿಂಗೈಕ್ಯರಾದರು.ಬಳ್ಳಾರಿ ಜಿಲ್ಲೆ ಕೂಡ್ಲಿಗಿ ಹಿರೇಮಠದ ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ ತಮ್ಮ ದಾರ್ಮಿಕ, ಆಧ್ಯಾತ್ಮಿಕ ಕಾರ್ಯಕ್ರಮಗಳ ಮೂಲಕ ಮನೆಮಾತಾಗಿದ್ದರು. ಆ.28ರ ಮಧ್ಯಾಹ್ನ 12 ಗಂಟೆಗೆ ಕೂಡ್ಲಿಗಿ ಹಿರೇಮಠದ ಆವರಣದಲ್ಲಿ ಅಂತ್ಯಕ್ರಿಯೆ ನಡೆಸಲು ಸಿದ್ಧತೆ ನಡೆಸಲಾಗುತ್ತಿದೆ. ಹೈದ್ರಾಬಾದ್ ಕರ್ನಾಟಕ ಹಿಂದುಳಿದ ಪ್ರದೇಶದಲ್ಲಿ ಕಳೆದ ಆರು ದಶಕದಿಂದ ಶಿಕ್ಷಣ ಕ್ಷೇತ್ರದಲ್ಲಿ ಸುಧಾರಣೆಗಾಗಿ ಸ್ವಾಮೀಜಿ ಬಹುವಾಗಿ