ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಚೆನ್ನೈನಲ್ಲಿರುವ ತಮಿಳುನಾಡು ಮುಖ್ಯಮಂತ್ರಿ M.K. ಸ್ಟಾಲಿನ್ ಅವರ ನಿವಾಸಕ್ಕೆ ಭೇಟಿ ನೀಡಿದ್ದು, ತೀವ್ರ ಕುತೂಹಲ ಕೆರಳಿಸಿದೆ. 2024ರಲ್ಲಿ ನಡೆಯಲಿರುವ ಸಾರ್ವತ್ರಿಕ ಚುನಾವಣೆಯ ಕುರಿತು ಈ ವೇಳೆ ಮಾತುಕತೆ ನಡೆಸಲಾಗಿದೆ ಎಂಬ ಊಹಾಪೋಹಗಳಿಗೆ ಮಮತಾ ಬ್ಯಾನರ್ಜಿ ತೆರೆ ಎಳೆದಿದ್ದಾರೆ. ನಾವು ಯಾವುದೇ ರೀತಿಯ ರಾಜಕೀಯ ವಿಚಾರಗಳನ್ನು ಚರ್ಚೆ ಮಾಡಿಲ್ಲ. ಸ್ಟಾಲಿನ್ ನನ್ನ ತಮ್ಮನಿದ್ದಂತೆ. ಹೀಗಾಗಿ, ಆತನ ಮನೆಗೆ ತೆರಳಿ, ಕಾಫಿ ಕುಡಿದು ಬಂದಿದ್ದೇನೆ ಎಂದಿದ್ದಾರೆ.