ಬೆಂಗಳೂರು:75ಕ್ಕೂ ಹೆಚ್ಚು ಮಹಿಳೆಯರನ್ನು ಹಾಗೂ ಯುವತಿಯರನ್ನು ವಂಚಿಸಿದ್ದ 28ರ ವ್ಯ್ಕ್ತಿಯೊಬ್ಬನನ್ನು ಬೆಂಗಳೂರಿನ ಈಶಾನ್ಯ ವಲಯ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಹಾಸನ ಮೂಲದ ಸಾದತ್ ಖಾನ್ ಎಂದು ತಿಳಿದುಬಂದಿದೆ. ಈತ ಖಾಸಗಿ ರೆಸಾರ್ಟ್ ವೊಂದರಲ್ಲಿ ಟೆಲಿಕಾಲರ್ ಆಗಿದ್ದು, ಅಲ್ಲಿಗೆ ಬಂದ ಮಹಿಳೆಯರ ಸ್ನೇಹ ಸಂಪಾದಿಸಿ ವಂಚಿಸುತ್ತಿದ್ದ. ಮೊದಲು ಅವರೊಂದಿಗೆ ಲೈಂಗಿಕ ಸಂಪರ್ಕಮಾಡಿ ಬಳಿಕ ಹಣಕ್ಕಾಗಿ ಬ್ಲ್ಯಾಕ್ ಮೇಲ್ ಮಾಡುವುದನ್ನೇ ಈತ ಕಾಯಕವಾಗಿಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. 17