ವಿದ್ಯುತ್ ತಂತಿ ಮೇಲೆ ಬಿದ್ದಿದ್ದ ವಸ್ತು ತೆಗೆಯಲು ಹೋಗಿ ವಿದ್ಯುತ್ ಶಾಕ್ ಹೊಡೆದು ವ್ಯಕ್ತಿಯೋರ್ವ ಸಾವನ್ನಪ್ಪಿದ ಘಟನೆ ಹಾಸನದ ಉದಯಗಿರಿ ಬಡಾವಣೆಯಲ್ಲಿ ನಡೆದಿದೆ. 58 ವರ್ಷದ ಮಲ್ಲಪ್ಪ ಎಂಬ ವ್ಯಕ್ತಿಯು ಹಿಮ್ಸ್ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ. ಈತನ ಮನೆಯ ಮುಂದೆ ಹಾದು ಹೋಗಿದ್ದ ವಿದ್ಯುತ್ ತಂತಿ ಮೇಲೆ ಬಿದ್ದಿದ್ದ ವಸ್ತುವನ್ನು ಕೋಲಿನ ಸಹಾಯದಿಂದ ತೆಗೆಯಲು ಮುಂದಾಗಿದ್ದಾನೆ. ಆಗ ಮಲ್ಲಪ್ಪನಿಗೆ ವಿದ್ಯುತ್ ಶಾಕ್ ಹೊಡೆದಿದೆ. ಈ ಪರಿಣಾಮ ಮಲ್ಲಪ್ಪ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.